ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್​ಗೆ ಸಿಬಿಐ ಶಾಕ್​: ಐಟಿ, ಇಡಿ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಆಘಾತ..!

DKS
Published on

ಬೆಂಗಳೂರು: ಉಪಚುನಾವಣೆಯ ತಯಾರಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಸಿಬಿಐ ಅಧಿಕಾರಿಗಳು ಶಾಕ್​ ನೀಡಿದ್ದು, ಸೋಮವಾರ ಬೆಳ್ಳಂಬೆಳಗ್ಗೆಯೇ ಡಿಕೆಶಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಬೆಂಗಳೂರಿನ ಸದಾಶಿವ ನಗರದ ನಿವಾಸದ ಮೇಲೆ ಐವರು ಅಧಿಕಾರಿಗಳ ತಂಡವು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಮುಂಜಾನೆ ದಾಳಿ ಮಾಡಿಲಾಗಿದೆ. ಡಿಕೆಶಿ ಮಾತ್ರವಲ್ಲದೆ ಏಕಕಾಲದಲ್ಲಿ ಸಹೋದರ ಡಿಕೆ ಸುರೇಶ್ ಮನೆ ಮೇಲೂ ಸಿಬಿಐ ದಾಳಿ ಮಾಡಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲದೆ ಕನಕಪುರದ ನಿವಾಸದ ಮೇಲೂ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಈ ಹಿಂದೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಡಿಕೆಶಿ ವಿಚಾರಣೆ ಎದುರಿಸಿದ್ದರು. ಅಲ್ಲದೆ, ಬಂಧನಕ್ಕೆ ಒಳಗಾಗಿ ಜೈಲು ವಾಸವನ್ನು ಅನುಭವಿಸಿ, ಜಾಮೀನಿನ ಮೂಲಕ ಹೊರಬಂದಿದ್ದಾರೆ. ಇದೀಗ ಸಿಬಿಐ ಅಧಿಕಾರಿಗಳು ದಾಳಿ ಮಾಡಿರುವುದು ಡಿಕೆಶಿ ಮತ್ತೊಮ್ಮೆ ಶಾಕ್​ ಎದುರಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net