ನರೇಗಲ್ಲ: ಪಟ್ಟಣದ ಶ್ರೀ ಬಸವೇಶ್ವರ ಸಿಬಿಎಸ್‌ಇ ಆಂಗ್ಲ ಮಾಧ್ಯಮ ಶಾಲೆಯ 12ನೇ ವಾರ್ಷಿಕೋತ್ಸವ ಜ.11ರಂದು ಸಂಜೆ 5ಕ್ಕೆ ಶಾಲಾ ಆವರಣದಲ್ಲಿ ಜರುಗಲಿದೆ ಎಂದು ಪ್ರಾಚಾರ್ಯ ಬಿ.ಎಚ್. ಬಂಡಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಾಲಕೆರೆ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಎಸ್.ಎ. ಪಿಯು ಕಾಲೇಜಿನ ಪ್ರಾಚಾರ್ಯ ವೈ. ಸಿ. ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ಎನ್.ಆರ್. ಗೌಡರ, ಡಾ.ಜಿ.ಕೆ. ಕಾಳೆ, ವಿ.ಬಿ. ಸೋಮನಕಟ್ಟಿಮಠ, ಸದಾಶಿವ ಕರಡಿ ಮತ್ತು ಮಲ್ಲಿಕಾರ್ಜುನಪ್ಪ ಮೆಣಸಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.