ಸಿಸಿ ಕ್ಯಾಮರಾ ಕಿತ್ತು ಹಾಕಿದ ಕಿಡಿಗೇಡಿಗಳು

Hadagali Camara
ಮೈಲಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿಸಿ ಕ್ಯಾಮರಾಗಳನ್ನು ಕಿತ್ತು ಹಾಕಿರುವುದು.
Published on

ಹೂವಿನಹಡಗಲಿ: ಮೈಲಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನು ಕಿಡಿಗೇಡಿಗಳು ಶನಿವಾರ ರಾತ್ರಿ ಕಿತ್ತು ಹಾಕಿದ್ದಾರೆ.

ಶಾಲಾ ಆವರಣದಲ್ಲಿ ಸಂಜೆ ಆಗುತ್ತಿದಂತೆ ಪೋಕರಿಗಳು, ಮದ್ಯಪಾನ, ಇಸ್ಪೀಟ್ ಜೂಜಾಟ ಸೇರಿದಂತೆ ಇತರೆ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಇವೆಲ್ಲ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗುತ್ತವೆಂದು ಶನಿವಾರ ರಾತ್ರಿ ಕಿತ್ತು ಹಾಕಿದ್ದಾರೆ ಎನ್ನಲಾಗಿದೆ.

ಈ ಕುರಿತು ಮುಖ್ಯಶಿಕ್ಷಕ ಎಸ್.ಪ್ರಕಾಶ್ ಮಾತನಾಡಿ, ಶಾಲಾ ಆವರಣದಲ್ಲಿ ಅಳವಡಿಸಿದ್ದ ಕ್ಯಾಮರಾಗಳನ್ನು ಎರಡು ದಿನಗಳ ಹಿಂದೆ ಯಾರೋ ಕಿಡಿಗೇಡಿಗಳು ಕೋಲಿನಿಂದ ಕಿತ್ತು ಹಾಕಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಮೇಲಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ದೂರು ನೀಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net