

ಗುಂಡ್ಲುಪೇಟೆ: ತಾಲೂಕಿನ ದೇಪಾಪುರ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ 30 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕೊಡಸೋಗೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮಣ್ಣಿ, ಉಪಾಧ್ಯಕ್ಷೆ ಪುಟ್ಟಮ್ಮ, ಮಲೆಮಹದೇಶ್ವರ ಬೆಟ್ಟದ ಧರ್ಮದರ್ಶಿ ಮಂಡಲಿಯ ಮಾಜಿ ಅಧ್ಯಕ್ಷ ಡಿ.ಎಸ್.ಸಿದ್ದಪ್ಪ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಡಿ.ಎಸ್.ಶಿವಸ್ವಾಮಿ, ಗ್ರಾಮಪಂಚಾಯಿತಿ ಸದಸ್ಯರು ಮುಖಂಡರು ಸೇರಿದಂತೆ ಹಲವರು ಇದ್ದರು.