ಎರಡು ಪ್ರಕರಣದಲ್ಲಿ ಸಿಸಿಬಿಯಿಂದ 1 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

Drugs
Published on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ದ್ರವ್ಯದ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಪ್ರತ್ಯೇಕ ಕಡೆ ದಾಳಿ ನಡೆಸಿ ಆರು ಮಂದಿ ಪೆಡ್ಲರ್ ಗಳನ್ನು ಬಂಧಿಸಿ 1 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ರಾಮಮೂರ್ತಿನಗರದ ಕಲ್ಕೆರೆಯಲ್ಲಿ ದಾಳಿ ನಡೆಸಿ ನೈಜೀರಿಯಾ ಪ್ರಜೆ ಒಬ್ಬ ಮತ್ತು ಕೇರಳದ ನಾಲ್ವರು ಸೇರಿ ಐವರನ್ನು ಬಂಧಿಸಿದ್ದಾರೆ. ಇವರ ಬಳಿ 55ಲಕ್ಷ ಮೌಲ್ಯದ ಮಾದಕ ದ್ರವ್ಯ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಯಲಹಂಕ ಬಳಿಯ ಬಾಲಾಜಿ ಲೇಔಟ್ ನಲ್ಲಿನ ಮನೆ ಮೇಲೆ ದಾಳಿ ನಡೆಸಿ 50 ಲಕ್ಷ ಮೌಲ್ಯದ ಮಾದಕವಸ್ತು ಜಪ್ತಿ ಮಾಡಿದ್ದಾರೆ. ಈ ಪ್ರಕರಣ ದಲ್ಲಿ ನೈಜೀರಿಯಾ ಪ್ರಜೆಯನ್ನು ಬಂಧಿಸಲಾಗಿದೆ. ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿರುವ ಈತ ವೀಸಾ ಅವಧಿ ಮುಗಿದ ಮೇಲೂ ನೆಲೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net