ಯಾದಗಿರಿ PSI ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಸಿಸಿಬಿ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

ThimmeGowda
Published on

ಬೆಂಗಳೂರು: ಯಾದಗಿರಿ ನಗರ ಸೈಬರ್​ ಠಾಣೆಯ PSI ಪರಶುರಾಮ್​ ಅವರ ಅನುಮಾನಾಸ್ಪದ ಸಾವಿನ ಸುದ್ದಿ ಮಾಸುವ ಮುನ್ನವೇ ಇದೀಗ ಸಿಸಿಬಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಬಿಡದಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ತಿಮ್ಮೇಗೌಡ ಎಂದು ಗುರುತಿಸಲಾಗಿದ್ದು, ಇವರು ಸಿಸಿಬಿಯಲ್ಲಿ ಇನ್ಸ್​ಪೆಕ್ಟರ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದ್ದು, ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚೆನ್ನಪಟ್ಟಣ ಮೂಲದವಾರದ ತಿಮ್ಮೇಗೌಡ ಅವರು ಬಿಡದಿಯಲ್ಲಿ ವಾಸವಿದ್ದರು. ಬೆಂಗಳೂರು, ರಾಮನಗರ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ತಿಮ್ಮೇಗೌಡ ಅವರನ್ನು ಒಂದೂವರೆ ತಿಂಗಳ ಹಿಂದಷ್ಟೇ ಬೆಂಗಳೂರು ಸಿಸಿಬಿ ಕಚೇರಿಗೆ ವರ್ಗಾಯಿಸಲಾಗಿತ್ತು. ಘಟನೆ ಸಂಬಂಧ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net