ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್​ ಜಾರಿ!

Radhika
Published on

ಬೆಂಗಳೂರು: ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್​ ಜಾರಿ ಮಾಡಿದೆ.

ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜ್​ ಅಲಿಯಾಸ್​ ಸ್ವಾಮಿ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದಿದೆ. ಇದನ್ನೂ ಓದಿರಿ ನಿನ್ ಹೆಂಡ್ತಿಗೆ ಸೀರೆ ತರಲು ಹೋಗಿದ್ಯಾ? ರಾಸ್ಕಲ್​…: ಅಧಿಕಾರಿಗಳ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ಯುವರಾಜ್​ನಿಂದ ರಾಧಿಕಾಗೆ 1.25 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ, ಯುವರಾಜ್​ನಿಂದ 15 ಲಕ್ಷ ಹಾಗೂ ಆತನ ಭಾವನಿಂದ 60 ಲಕ್ಷ ರೂಪಾಯಿ ಸೇರಿ ಒಟ್ಟು 75 ಲಕ್ಷ ಹಣವನ್ನು ಸಿನಿಮಾ ಮಾಡೋಕೆ ಪಡೆದಿದ್ದೆ. ಈ ಬಗ್ಗೆ ಯಾವುದೇ ಅಗ್ರಿಮೆಂಟ್ ಮಾಡಿಕೊಂಡಿರಲಿಲ್ಲ ಎಂದಿದ್ದರು.

ಯುವರಾಜ್​ನಿಂದ ರಾಧಿಕಾಗೆ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಡಾಲರ್ಸ್ ಕಾಲನಿಯಲ್ಲಿರೋ ರಾಧಿಕಾ ಕುಮಾರಸ್ವಾಮಿ ಮನೆಗೆ ಸಿಸಿಬಿ ಅಧಿಕಾರಿಗಳು ನೋಟಿಸ್​ ಕೊಟ್ಟಿದ್ದಾರೆ. ನಾಳೆ (ಶುಕ್ರವಾರ) ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರ್​ ಆಗುವಂತೆ ಸೂಚಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net