ಅಕ್ರಮ ಹುಕ್ಕಾ ಬಾರ್‌ಗೆ ಸಿಸಿಬಿ ಪೊಲೀಸರ ದಾಳಿ ಮೂವರು ಆರೋಪಿಗಳ ಬಂಧನ

mng--25 may Siddiq
Published on

ಮಂಗಳೂರು: ಕಂಕನಾಡಿ ಮ್ಯಾಕ್ ಮಾಲ್ ನ ಪಾಕಿರ್ಂಗ್‌ನಲ್ಲಿರುವ ಕೊಠಡಿಯೊಂದರಲ್ಲಿ ಅಕ್ರಮ ಹುಕ್ಕಾ ಬಾರ್‌ಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿದ್ದಿಕ್ ಯಾನೆ ಎಂಎಫ್‌ಸಿ ಸಿದ್ದಿಕ್, ಅಬ್ದುಲ್ ನಾಸಿರ್ ಮತ್ತು ಸಫ್ವಾನ್ ಬಂಧಿತರು. 2023-24ರಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಗಿ ಪಡೆದಿದ್ದ ಇವರು ಕೆಫೆಟೇರಿಯಾ ನಡೆಸುವ ನೆಪದಲ್ಲಿ ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದರು.

ನಿಯಮಗಳನ್ನು ಉಲ್ಲಂಘಿಸಿ ಯುವಕರನ್ನು ಮಾದಕ ಭ್ರಮಾ ಲೋಕದಲ್ಲಿ ತೇಲಿಸಿ ಹೆಚ್ಚಿನ ಹಣ ಸಂಪಾದಿಸಿ ಅಪರಾಧ ಎಸಗಿರುವುದು ಕಂಡು ಬಂದಿದೆ. ಹುಕ್ಕಾ ಬಾರ್ ನಿಂದ ಹುಕ್ಕಾ ಸೇದುವ ಉಪಕರಣಗಳು, ತಂಬಾಕು ಉತ್ಪನ್ನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ. ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ಎಎಸ್‌ಐ ಸುಜನ್ ಶೆಟ್ಟಿ, ಕದ್ರಿ ಪೊಲೀಸ್ ಠಾಣಾ ಪಿಎಸ್‌ಐ ಮನೋಹರ್ ಪ್ರಸಾದ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net