ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಗಾಂಜಾ ಸೇದುವ ಚಿಲುಮೆ ಪತ್ತೆ

New Project (1)
Published on

ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ‌ ಮಂಗಳವಾರ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಜೈಲಿನಲ್ಲಿ ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಪತ್ತೆಯಾಗಿದೆ.

ಜೈಲಿನಲಲ್ಲೇ ಕುಳಿತು ಪಾತಕಿಗಳು ಅವ್ಯವಹಾರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ದಾಳಿ ನಡೆಸಿದ್ದು, ಪರಪ್ಪನ ಅಗ್ರಹಾರದ ಪ್ರತಿ ಜಾಗವನ್ನೂ ಜಾಲಾಡುತ್ತಿದ್ದಾರೆ. ಕೈದಿಗಳ ಬಳಿ ಮೊಬೈಲ್, ಗಾಂಜಾ ಮತ್ತು ಗಾಂಜಾ ಸೇದುವ ಚಿಲುಮೆ ಸೇರಿದಂತೆ ಇತರ ಅಕ್ರಮ ವಸ್ತುಗಳು ಪತ್ತೆಯಾಗಿವೆ. ಈ ಹಿಂದೆ ದಾಳಿ ನಡೆಸಿದಾಗಲೂ ಗಾಂಜಾ ಪತ್ತೆಯಾಗಿತ್ತು.

ಕೆಲ ಕೈದಿಗಳು ಜೈಲಿನಲ್ಲಿಯೇ ಕೂತು ಅನೇಕ ಅಪರಾಧ ಕೃತ್ಯದಲ್ಲಿ ತೊಡಗಿರುವುದು ಪತ್ತೆಯಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್​ ಬಳಕೆ ಹಾಗೂ ಗಾಂಜಾ ಸೇವನೆ ಬಗ್ಗೆ ದಿಗ್ವಿಜಯ ನ್ಯೂಸ್​ ಚಾನಲ್​ ವರದಿ ಪ್ರಸಾರ ಮಾಡಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net