ದಸರಾ ಕ್ರೀಡಾಕೂಟಕ್ಕೆ ಸಿಸಿಪಿ ಚಾಲನೆ

20 NRD 4
Published on

ನರಗುಂದ: ಕ್ರೀಡೆ ಮನುಷ್ಯನ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಯುವಕರು ಆರೋಗ್ಯದಿಂದ ಇರಬೇಕಾದರೆ ಕ್ರೀಡೆಯಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಪಂ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಯುವಕ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಒತ್ತಡರಹಿತ ಜೀವನಕ್ಕೆ ಕ್ರೀಡೆಗಳು ಅವಶ್ಯ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದನ್ನು ರೂಢಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದರು.
ಪುರಸಭೆ ಅಧ್ಯಕ್ಷೆ ಅನ್ನಪೂರ್ಣಾ ಯಲಿಗಾರ ಕ್ರೀಡಾಜ್ಯೋತಿ ಸ್ವೀಕರಿಸಿದರು. ತಹಸೀಲ್ದಾರ್ ಶ್ರೀಶೈಲ ತಳವಾರ, ಪುರಸಭೆ ಸದಸ್ಯ ರಾಚನಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಗುರುನಾಥ ಹೂಗಾರ, ಸಿಪಿಐ ಮಂಜುನಾಥ ನಡುವಿನಮನಿ, ಬಸವರಾಜ ಮಳಗಿ, ಬಸ್ಸು ಪಾಟೀಲ, ಶಂಕರ ಪಲ್ಟನಕರ್, ಉಮೇಶ ಯಳ್ಳೂರ, ಬಿ.ಎನ್. ಚವಡಿ, ಆರ್.ಬಿ. ಅಳಗವಾಡಿ, ಬಿ.ಬಿ. ಐನಾಪೂರ, ಯುವಜನ ಸೇವಾ ಕ್ರೀಡಾ ಇಲಾಖೆ ಅಧಿಕಾರಿ ಎನ್.ಆರ್. ನಿಡಗುಂದಿ ಉಪಸ್ಥಿತರಿದ್ದರು. ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಧ್ವಜವಂದನೆ ಹಾಗೂ ಪಥಸಂಚಲನ ಜರುಗಿತು. ರಮೇಶ ಕಗಧಾಳ, ಬಿ.ಎನ್. ಚವಡಿ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net