ಎಲ್ಲೆಂದರಲ್ಲಿ ಕಸ ಎಸೆಯುವವರ ಮೇಲೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು

19-07-rama-cctv
Published on

ಬೆಂಗಳೂರು: ಎಲ್ಲೆಂದರಲ್ಲಿ ಕಸ ಎಸೆಯುವವವರ ಪ್ರಮಾಣ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮರಾ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೆ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲು ಸೂಚನೆ ನೀಡಲಾಗಿದೆ. ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ ಎಂದರು.

ಡೆಂಘೆ ಪ್ರಕರಣ ಹೆಚ್ಚಳವಾಗುತ್ತಿವೆ. ಡೆಂಘೆ ನಿಯಂತ್ರಣಕ್ಕೆ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದು ತಿಳಿಸಿದರು.

ಸಿಬ್ಬಂದಿ ಕೊರತೆ ಬಗ್ಗೆ ಗಮನಹರಿಸುತ್ತೇವೆ

ರಾಮನಗರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಅನುಮತಿ ಸಿಕ್ಕಿಲ್ಲ ಎಂಬ ಪ್ರಶ್ನೆಗೆ, ರಾಮನಗರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ತರಬೇಕು ಎಂಬುದು ನಮ್ಮೆಲ್ಲರ ಬೇಡಿಕೆಯಾಗಿತ್ತು. ಈ ವಿಚಾರವನ್ನು ಬಜೆಟ್‌ನಲ್ಲೂ ಸೇರಿಸಲಾಗಿತ್ತು. ಸಿಬ್ಬಂದಿ ಕೊರತೆ ಎಂದು ಅನುಮತಿ ನೀಡಿಲ್ಲ ಎಂಬ ವಿಚಾರ ತಿಳಿಸಿದ್ದು, ಈ ಬಗ್ಗೆ ಗಮನಹರಿಸುತ್ತೇವೆ ಎಂದು ಶಿವಕುಮಾರ್ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net