ವಾತಾವರಣ ಸ್ವಚ್ಛವಾಗಿದ್ದರೆ ಡೆಂೆ ನಿಯಂತ್ರಣ

21 HDK01
Published on

ಎಚ್.ಡಿ.ಕೋಟೆ: ಡೆಂೆ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿದ್ದು ಪ್ರಮುಖವಾಗಿ ಸುತ್ತಲ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡರೆ ನಿಯಂತ್ರಿಸಬಹುದು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸುವರ್ಣಾ ತಿಳಿಸಿದರು.


ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ಡೆಂೆ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಸೊಳ್ಳೆಗಳ ನಿಯಂತ್ರಣದಿಂದ ಡೆಂೆ ಹರಡುವುದನ್ನು ತಡೆಗಟ್ಟಬಹುದು. ಸೊಳ್ಳೆಗಳು ಮನೆಯ ಒಳಗೆ ಹಾಗೂ ಹೊರಗೆ ನೀರು ಶೇಖರಿಸುವ ತೊಟ್ಟಿ, ಮಣ್ಣಿನ ಮಡಕೆ, ಉಪಯೋಗಿಸದ ಒರಳು ಕಲ್ಲುಗಳು, ತಟ್ಟೆಗಳು, ಪೇಪರ್ ಲೋಟಗಳು, ಬಳಸಿದ ಟಯರ್‌ಗಳು, ಎಳನೀರು ಚಿಪ್ಪುಗಳು, ಘನ ತ್ಯಾಜ್ಯ ವಸ್ತುಗಳಲ್ಲಿ ವಾಸಿಸುತ್ತವೆ. ಆದ್ದರಿಂದ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದರು.


ನೀರಿನ ತೊಟ್ಟಿಗಳು, ಡ್ರಮ್‌ಗಳು, ಬ್ಯಾರೆಲ್‌ಗಳು, ಏರ್‌ಕೂಲರ್‌ಗಳನ್ನು ವಾರಕ್ಕೊಮ್ಮೆ ಸ್ವಚ್ಛ ಮಾಡಬೇಕು. ಎಳನೀರು ಚಿಪ್ಪು, ಮರದ ಪೊಟರೆ, ಒಡೆದ ಬಾಟಲಿಗಳು, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ ಬಳಸುವುದು, ಮೈತುಂಬ ಬಟ್ಟೆ ಧರಿಸಬೇಕು ಎಂದು ಸಲಹೆ ನೀಡಿದರು.


ತಹಸೀಲ್ದಾರ್ ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸೋಮಣ್ಣ, ಜಿಲ್ಲಾ ರೋಗವಾಹಕ ಆಶ್ರಿತ ಮೇಲ್ವಿಚಾರಕ ಬಸವರಾಜು, ಜಯರಾಮ, ನಾಗೇಂದ್ರ, ರವಿರಾಜ್, ಸರಳಾ, ಅಶೋಕ್, ಅರಾಲಪ್ಪ, ಶರಣಪ್ಪ, ಪ್ರಶಾಂತ್, ಲಕ್ಷ್ಮೀಭಟ್, ರೇಖಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸೇಂಟ್ ಮೇರಿಸ್ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net