ಕಾವೇರಿ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯ

2 gkp 07
Published on

ಗೋಣಿಕೊಪ್ಪ: ಕಾವೇರಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೋಮವಾರ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಿಯಪ್ಪ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಸ್.ಮಾದಯ್ಯ ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಿಯಪ್ಪ, ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದೂರ್ ಶಾಸ್ತ್ರಿ ಅವರ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಶಾಂತಿ, ಸತ್ಯ, ಅಹಿಂಸೆ ಮಾರ್ಗ ಅನುಸರಿಸಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.


ಎನ್‌ಎಸ್‌ಎಸ್ ಅಧಿಕಾರಿಗಳಾದ ಎಂ.ಎನ್.ವನಿತ್‌ಕುಮಾರ್, ದರ್ಶನ್, ವೇಣು, ಸೃಜನ್, ಧನ್ಯ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net