ಅಧಿಕಾರಿಗಳ ಶ್ರಮದಾನ, ಸ್ವಚ್ಛತಾ ಕಾರ್ಯ

02 HANUR 1 A
Published on

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಅಧಿಕಾರಿಗಳು ಹಾಗೂ ನೌಕರರು ಶ್ರಮದಾನದಲ್ಲಿ ಭಾಗಿಯಾಗುವುದರ ಮೂಲಕ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಿದರು.


ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ವಿಶ್ವ ಮಾನವ ಸಮಾಜವನ್ನು ನಿರ್ಮಾಣ ಮಾಡುವುದರ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮಹಾನ್ ನಾಯಕ. ದೇಶ ಸ್ವಾತಂತ್ರ್ಯ ಗಳಿಸುವಲ್ಲಿ ಗಾಂಧೀಜಿ ಅವರ ಪಾತ್ರ ಹಿರಿದು. ಹಾಗಾಗಿ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸುವುದರ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.
ರಾಜಸ್ವ ನಿರೀಕ್ಷಕ ಶೇಷಣ್ಣ, ಗ್ರಾಮ ಆಡಳಿತ ಅಧಿಕಾರಿ ಕಾರ್ತಿಕ್, ನೌಕರರಾದ ಸಿದ್ದರಾಜು, ಶೇಖರ್, ಕುಮಾರ್ ಇದ್ದರು.


ಬಿಇಒ ಕಚೇರಿ: ಪಟ್ಟಣದ ಬಿಇಒ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ನೌಕರರು ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ವಚ್ಛತಾ ಕಾರ್ಯ ನಡೆಸಿದರು. ಬಿಇಒ ಗುರುಲಿಂಗಯ್ಯ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿ ಅವರ ಪಾತ್ರ ಅಮೋಘವಾದದು. ಜನರ ಕಲ್ಯಾಣದ ಮೂಲಕ ಸುಖೀ ರಾಜ್ಯದ ಕಲ್ಪನೆಯ ಕನಸನ್ನು ಕಂಡಿದ್ದರು. ದೀನ ದಲಿತರ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ್ದರು. ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಾಗೆಯೇ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡುವುದರ ಮೂಲಕ ಜನಮನ್ನಣೆ ಗಳಿಸಿದ್ದ ಲಾಲ್ ಬಹಾದೂರ್ ಶಾಸ್ತ್ರಿ ಅವರ ಆಡಳಿತ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ಶ್ಲಾಘಿಸಿದರು.


ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹಾದೇವ, ಶಿಕ್ಷಣ ಸಂಯೋಜಕರಾದ ಅಶೋಕ್, ಚಿನ್ನಪ್ಪಯ್ಯ, ಮಹೇಶ್, ಸಿಬ್ಬಂದಿ ಪೂರ್ಣಿಮಾ, ಮೀನಾಕ್ಷಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net