ಜಯಂತಿ ಅರ್ಥಪೂರ್ಣ ಆಚರಿಸಿ

Published on

ಬಳ್ಳಾರಿ : ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.07 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.

ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಜಯಂತಿ ಯಶಸ್ವಿಗೆ ಸಮುದಾಯ ಹಾಗೂ ಅಧಿಕಾರಿಗಳ ಎಲ್ಲರ ಸಹಕಾರವೂ ಅಗತ್ಯವಿದೆ. ಅ.07 ರಂದು ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಪುತ್ಥಳಿ ಆವರಣ ಸುತ್ತಲೂ ಸ್ವಚ್ಛತೆ, ಅಲಂಕಾರ ವ್ಯವಸ್ಥೆ ಕೈಗೊಳ್ಳಬೇಕು ಎಂದರು.

ಜಯಂತಿ ಅಂಗವಾಗಿ ಕನಕದುರ್ಗಮ್ಮ ದೇವಸ್ಥಾನದಿಂದ ಮೆರವಣಿಗೆ ಆರಂಭಗೊಂಡು ವಾಲ್ಮೀಕಿ ಭವನದ ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿದೆ. ಸಂಚಾರ ಮಾರ್ಗಕ್ಕೆ ಅಡಚಣೆಯಾಗದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕು ಎಂದು ಹೇಳಿದರು.

ಮೆರವಣಿಗೆಯಲ್ಲಿ ರಾಮಾಯಣ ಕಥಾಸಂಗ್ರಹದ ವೇಷಧಾರಿಗಳು ಒಳಗೊಂಡ ಕಲಾತಂಡ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಬೇಕು. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ನಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ತಿಳಿಸಿದರು.

ಊಟ, ಕುಡಿವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net