ಸಂವಿಧಾನ ದಿನ ಆಚರಿಸಿ ಜನರಿಗೆ ಜಾಗೃತಿ

26-GPT-1
Published on


ಚಾಮರಾಜನಗರ : ಕೇಂದ್ರ ಸರ್ಕಾರ ಸಂವಿಧಾನ ದಿನಾಚರಣೆ ಜಾರಿಗೊಳಿಸಿರುವುದರಿಂದ ಜನರಿಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸಾಧ್ಯವಾಗುತ್ತಿದೆ ಎಂದು ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ್ ಹೇಳಿದರು.

ಗುಂಡ್ಲುಪೇಟೆ ಪಟ್ಟಣದ ವಕೀಲರ ಸಂಘದ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅಂಬೇಡ್ಕರ್ ಅವರ ಗೌರವಾರ್ಥವಾಗಿ ರಾಷ್ಟ್ರೀಯ ಕಾನೂನು ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.


ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್, ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಕಾಂತಮ್ಮ, ಸರ್ಕಾರಿ ಅಭಿಯೋಜಕರಾದ ರೇವಣ್ಣ ಮತ್ತು ಉಷಾರಾಣಿ, ವಕೀಲರ ಸಂಘದ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net