

ಕುಶಾಲನಗರ: ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ಚಿಕ್ಕ ಅಳುವಾರದ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಭಾಗವಹಿಸಿ ಸಂಸ್ಥೆಯ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ತಿಳಿಸಿದರು.
ಸಂಸ್ಥೆಯ ನಿರ್ದೇಶಕ ಡಾ. ಎಂ.ಸಿ. ಶಿವಕುಮಾರ್ ನೇತೃತ್ವದಲ್ಲಿ ಸಂಸ್ಥೆಯ ಎಲ್ಲ ಸಿಬ್ಬಂದಿ ಗಿಡಗಳನ್ನು ನೆಟ್ಟು ಪರಿಸರ ದಿನ ಆಚರಿಸಿದರು. ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವಲಯಾರಣ್ಯಾಧಿಕಾರಿ ಗಣೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.