ಪರಿಸರಕ್ಕೆ ಹಾನಿಯಾಗದಂತೆ ಹಬ್ಬ ಆಚರಿಸಿ

Published on

ಬಳ್ಳಾರಿ : ಗೌರಿ ಗಣೇಶ ಹಬ್ಬವು ಭಕ್ತಿ ಭಾವನೆ ಪೂಜೆಯ ಹಬ್ಬವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಟಿ.ಎಂ.ಸಿದ್ದೇಶ್ವರ ಬಾಬು ಹೇಳಿದರು.

ನಗರದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ಪರಿಸರ ಸ್ನೇಹಿ ಗಣೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಗಣೇಶ ಹಬ್ಬವನ್ನು ವಾಯು, ಜಲ, ಶಬ್ದ ಹಾಗೂ ಮಣ್ಣು ಮಾಲಿನ್ಯ ರಹಿತವಾಗಿ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net