ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಆಚರಿಸಿ

ಯಲಬುರ್ಗಾ ತಾಲೂಕು ಬಿಜೆಪಿ ಯುವ ಮೋರ್ಚಾದ ವತಿಯಿಂದ ಸ್ವಾತಂತ್ರ್ಯೋತ್ಸವದ ನಿಮಿತ್ತ ಹರ್‌ಗರ್ ತಿರಂಗಾ ಯಾತ್ರೆ ಹಾಗೂ ಬೈಕ್‌ರ‌್ಯಾಲಿ ನಡೆಯಿತು. ಬಿಜೆಪಿ ಹಿರಿಯ ಮುಖಂಡ ಬಸಲಿಂಗಪ್ಪ ಭೂತೆ, ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಯುವ ಮೋರ್ಚಾ ಅಧ್ಯಕ್ಷ ಕಲ್ಲೇಶಪ್ಪ ಕರಮುಡಿ, ಪ್ರಮುಖರಾದ ವೀರಣ್ಣ ಹುಬ್ಬಳ್ಳಿ, ಶಿವಪ್ಪ ವಾದಿ, ಅಯ್ಯನಗೌಡ ಕೆಂಚಮ್ಮನವರ ಇತರರಿದ್ದರು.

Published on

ಯಲಬುರ್ಗಾ: ಸ್ವಾತಂತ್ರೋೃತ್ಸವವನ್ನು ಅದ್ದೂರಿಯಾಗಿ ಆಚರಿಸುವ ಉದ್ದೇಶದಿಂದ ಬಿಜೆಪಿಯಿಂದ ಹರ್‌ಗರ್ ತಿರಂಗಾ ಯಾತ್ರೆ ಆಯೋಜಿಸಲಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಬಸಲಿಂಗಪ್ಪ ಭೂತೆ ಹೇಳಿದರು.

ಪಟ್ಟಣದಲ್ಲಿ ತಾಲೂಕು ಬಿಜೆಪಿ ಯುವ ಮೋರ್ಚಾದಿಂದ ಸ್ವಾತಂತ್ರ್ಯೋತ್ಸವದ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಹರ್‌ಗರ್ ತಿರಂಗಾ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಾಭಿಮಾನ ಮೂಡಿಸುವುದು, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ 3ದಿನಗಳ ಕಾಲ ಎಲ್ಲರ ಮನೆಗಳಲ್ಲಿ ಸ್ವಾತಂತ್ರ್ಯ ದಿನವನ್ನು ಹಬ್ಬದಂತೆ ಆಚರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿದೆ. ಭಾರತವನ್ನು ವಿಶ್ವಗುರು ಮಾಡುವಲ್ಲಿ ಪ್ರಧಾನಿ ಮೋದಿ ಶ್ರಮ ಅಪಾರ. ಯುವಕರು ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದರು. ಬಿಜೆಪಿ ಕಚೇರಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಬೈಕ್ ರ‌್ಯಾಲಿ ನಡೆಸಲಾಯಿತು. ನಂತರ ಪಟ್ಟಣದ ಕೆಂಪುಕೆರೆಗೆ ಬಾಗಿನ ಅರ್ಪಿಸಲಾಯಿತು.

ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ, ಯುವ ಮೋರ್ಚಾ ಅಧ್ಯಕ್ಷ ಕಲ್ಲೇಶಪ್ಪ ಕರಮುಡಿ, ಪ್ರಮುಖರಾದ ವೀರಣ್ಣ ಹುಬ್ಬಳ್ಳಿ, ಶಿವಪ್ಪ ವಾದಿ, ಅಯ್ಯನಗೌಡ ಕೆಂಚಮ್ಮನವರ, ಅಮರ್ ನಿರಳ್ಳಿ, ಶರಣಪ್ಪ ಈಳಿಗೇರ, ಹನುಮಂತ ರಾಠೋಡ, ಶರಣಪ್ಪ ಗುಂಗಾಡಿ, ಬಸವರಾಜ ಗುಳಗುಳಿ, ಬಸವರಾಜ ಹಾಳಕೇರಿ, ವಸಂತ ಭಾವಿಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net