ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಿ

14ark-7
Published on

ಅರಕಲಗೂಡು: ನಾಡಹಬ್ಬ ಕನ್ನಡ ರಾಜ್ಯೋತ್ಸವ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಶಾಸಕ ಎ.ಮಂಜು ಸೂಚಿಸಿದರು.


ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವುದು, ನಾಡು-ನುಡಿಯನ್ನು ಬಿಂಬಿಸುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಜತೆಗೆ ಗಣ್ಯರಿಗೆ ಕನ್ನಡ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ಸಲಹೆ ನೀಡಿದರು.


ವಾಲ್ಮೀಕಿ ಜಯಂತಿಯಂದು ಸಮುದಾಯದ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸುವಂತೆ ತಿಳಿಸಿ, ಎರಡು ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ, ತಾಲೂಕು ಕಚೇರಿ ಶಿರಸ್ತೇದಾರ್ ಸಿ.ಸ್ವಾಮಿ, ಪಪಂ ಸದಸ್ಯ ಹೂವಣ್ಣ, ತಾಪಂ ಮಾಜಿ ಅಧ್ಯಕ್ಷ ನರಸೇಗೌಡ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net