ಸೌಹಾರ್ದದಿಂದ ಹಬ್ಬ ಆಚರಿಸಿ

tke police
ತರೀಕೆರೆಯಲ್ಲಿ ಗಣೇಶಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬ ಆಚರಣೆ ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಹಾಲಮೂರ್ತಿ ರಾವ್ ಮಾತನಾಡಿದರು. ಪರಮೇಶ್, ವಿ.ಎಸ್.ರಾಜೀವ್, ಎಸ್.ಗೀತಾ ಇತರರಿದ್ದರು.
Published on

ತರೀಕೆರೆ: ಗಣೇಶಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಸಾರ್ವಜನಿಕರು ಶಾಂತಿ, ಸೌಹಾರ್ದದಿಂದ ಆಚರಿಸಬೇಕು ಎಂದು ಡಿವೈಎಸ್‌ಪಿ ಹಾಲಮೂರ್ತಿ ರಾವ್ ಹೇಳಿದರು.

ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿ, ಗಣೇಶ ಪ್ರತಿಷ್ಠಾಪನೆಗೆ ಇಲಾಖೆಯಿಂದ ಅನುಮತಿ ಪಡೆಯಲು ಏಕಗವಾಕ್ಷಿ ಪದ್ಧತಿ ಜಾರಿಗೆ ತರಲಾಗಿದೆ. ಗಣೆಶೋತ್ಸವ ಆಚರಣಾ ಸಮಿತಿ ಆಯೋಜಕರು ದಾಖಲೆಗಳನ್ನು ತಾಪಂ ಹಾಗೂ ಪುರಸಭೆಗೆ ಸಲ್ಲಿಸಿದರೆ ಅನುಮತಿ ನೀಡಲಾಗುವುದು ಎಂದರು.
ಇನ್ಸ್‌ಪೆಕ್ಟರ್ ಕೆ.ವೀರೇಂದ್ರ ಮಾತನಾಡಿ, ಗಣಪತಿ ವಿಸರ್ಜನೆ ವೇಳೆ ಡಿಜೆ ಸೌಂಡ್ ಬಳಕೆ ನಿಷೇಧಿಸಿದೆ. ಆಯಾ ಧರ್ಮಗಳ ಸಂಸ್ಕೃತಿ ಬಿಂಬಿಸುವುದಕ್ಕೆ ಅಭ್ಯಂತರವಿಲ್ಲ. ಆದರೆ ಬೇರೆ ಧರ್ಮಗಳ ಭಾವನೆಗಳಿಗೆ ಧಕ್ಕೆ ತರಬಾರದು. ಏಕಗವಾಕ್ಷಿ ಪದ್ಧತಿಯಲ್ಲಿ ಅನುಮತಿ ಪಡೆದಂತೆ ಗಣೇಶ ಪ್ರತಿಷ್ಠಾಪನೆ ಮಾಡುವ ಆಯೋಜಕರು ಕಡ್ಡಾಯವಾಗಿ ಇಲಾಖೆ ನಿಯಮ ಪಾಲಿಸಬೇಕು. ಗಣಪತಿ ವಿಸರ್ಜನೆ ಮತ್ತು ಮೆರವಣಿಗೆ ವೇಳೆ ಡ್ರೋಣ್ ಕ್ಯಾಮರಾ ಬಳಸಿ ನಿಗಾ ವಹಿಸಬೇಕು. ಕಾನೂನು ಉಲ್ಲಂಸಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪುರಸಭೆ ಅಧ್ಯಕ್ಷ ಪರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ಕುಮಾರಪ್ಪ, ತಹಸೀಲ್ದಾರ್ ವಿ.ಎಸ್.ರಾಜೀವ್, ತಾಪಂ ಇಒ ಎಸ್.ಗೀತಾ, ಎಂಐಡಿಬಿ ಮಾಜಿ ಅಧ್ಯಕ್ಷ ಎನ್.ಮಂಜುನಾಥ್, ಜಿಪಂ ಮಾಜಿ ಸದಸ್ಯ ಕೆ.ಎಚ್.ಮಹೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net