ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಿ

12bkl1
Published on

ಭಟ್ಕಳ: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಗ್ರಾಮೀಣ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಮಂಜುನಾಥ ಲಿಂಗಾರೆಡ್ಡಿ ಹೇಳಿದರು.

ಮೀಣ ಠಾಣೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಷ್ಠಾಪನಾ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ, ಅಗ್ನಿಶಾಮಕ, ಆರೋಗ್ಯ, ಸ್ಥಳೀಯ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಜಿಲ್ಲಾಡಳಿತ ಹೊರಡಿಸಿದ ಸೂಚನೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಮಿತಿಗಳಿಗೆ ಸೂಚಿಸಿದರು.

ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಅಹಿತಕರ ಘಟನೆ ತಪ್ಪಿಸುವ ಕ್ರಮ ಕೈಗೊಳ್ಳಬೇಕು. ಧ್ವನಿವರ್ಧಕ ಬಳಕೆ ಸರ್ಕಾರ ನಿಗದಿಪಡಿಸಿದ ಮಿತಿಯೊಳಗೆ ಇರಬೇಕು, ಪ್ರಚೋದನಕಾರಿ ಹಾಡು, ಭಾಷಣ ನಿಷೇಧ, ಡಿಜೆ ಅಳವಡಿಕೆಗೆ ಅನುಮತಿ ಇಲ್ಲ. ರಸ್ತೆ ಸಂಚಾರಕ್ಕೆ ಅಡಚಣೆ ಬಾರದಂತೆ ನೋಡಿಕೊಳ್ಳಿ ಹಾಗೂ ಎಲ್ಲಾ ಕಾರ್ಯಕ್ರಮಗಳ ವಿವರಗಳನ್ನು ಮುಂಚಿತವಾಗಿ ಪೊಲೀಸರಿಗೆ ಸಲ್ಲಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಪಿಎಸ್​ಐಗಳಾದ ರನ್ನಗೌಡ, ಭರಮಪ್ಪ ಬೆಳಗಳಿ, ವಿವಿಧ ಭಾಗದ ಗಣೇಶೋತ್ಸವ ಸಮಿತಿ ಸದಸ್ಯರು, ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net