

ಗುಂಡ್ಲುಪೇಟೆ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜನಗರ ಉಪ ವಿಭಾಗದ ಡಿವೈಎಸ್‌ಪಿ ಅಧ್ಯಕ್ಷತೆಯಲ್ಲಿ ಸೋಮವಾರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಶಾಂತಿ ಸಭೆ ಆಯೋಜಿಸಲಾಗಿತ್ತು.
ಡಿವೈಎಸ್‌ಪಿ ಲಕ್ಷ್ಮಯ್ಯ ಮಾತನಾಡಿ, ಗೌರಿ-ಗಣೇಶ ಹಬ್ಬವನ್ನು ಶಾಂತಿಯಿಂದ ಆಚರಣೆ ಮಾಡಬೇಕಾಗಿದೆ. ಸಾರ್ವಜನಿಕರು ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ನ್ಯಾಯಾಲಯ ಮತ್ತು ಸರ್ಕಾರ ಹೊರಡಿಸಿರುವ ಆದೇಶ ಹಾಗೂ ಸೂಚನೆಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ಪಟ್ಟಣ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಜಯಕುಮಾರ್, ಠಾಣೆ ಸಿಬ್ಬಂದಿ ವನರಾಜು, ತೆರಕಣಾಂಬಿ ಠಾಣೆ ಪಿಎಸ್‌ಐ ಕೆ.ಎಂ. ಮಹೇಶ್, ಬೇಗೂರು ಪಿಸ್‌ಐ ನವೀನ್ ಇತರರಿದ್ದರು.