ಬಿ.ಎಂ.ಶೆಟ್ಟಿ ಸರ್ಕಾರಿ ಕಾಲೇಜಿನಲ್ಲಿ ಆಚರಣೆ

2ark-2
Published on


ಹಾಸನ : ಅರಕಲಗೂಡು ತಾಲೂಕಿನ ಕೊಣನೂರು ಬಿ.ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ 68ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.
ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಭಾಷಣಕಾರ ರಾಜೀವ್ ಕನ್ನಡ ನಾಡು-ನುಡಿ ಕುರಿತು ವಿವರಿಸಿದರು. ಪ್ರಾಂಶುಪಾಲ ಬಸವರಾಜು, ಕಾಲೇಜು ಅಭಿವೃದ್ಧಿ ಸಮಿತಿಯ ಚೌಡೇಗೌಡ, ವಾಸುದೇವ್, ರಾಜು ಇತರರಿದ್ದರು. ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವಾಗಿ ಪುಸ್ತಕಗಳನ್ನು ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net