

ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ವತಿಯಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಹಾಗೂ ಕುಂದಾಪುರ ಶಾಸಕರ ಕಚೇರಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಶನಿವಾರ ಆಚರಿಸಲಾಯಿತು.
ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಹಾಗೂ ಶಾಸಕರ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ಕಾರ್ಯಕರ್ತರು ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅವರಿಗೆ ಮತ್ತು ಕುಂದಾಪುರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಗೆ ರಕ್ಷೆಯನ್ನ ಕಟ್ಟಿ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಆಯೋಜಿಸಿದ್ದ ರಾಖಿ ಹಬ್ಬ ಕಾರ್ಯಕ್ರಮದ ನೇತೃತ್ವವನ್ನು ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ ವಹಿಸಿದ್ದರು.
ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿದ್ಯಾ ಸಾಲಿಯಾನ್, ಶ್ವೇತಾ ಶ್ರೀನಿಧಿ ಉಪಾಧ್ಯಾಯ, ಕುಂದಾಪುರ ಮಂಡಲ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್., ಜಿಲ್ಲಾ ಬಿಜೆಪಿ ಪ್ರಭಾರಿ ರಾಜೇಶ್ ಕಾವೇರಿ, ಒಬಿಸಿ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು, ಪಕ್ಷದ ಪ್ರಮುಖರಾದ ದಿವಾಕರ್ ಕಡ್ಗಿ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.