

ವಿಜಯಪುರ : ನಗರದ ಸಿದ್ಧೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ನಾಗರಪಂಚಮಿ ಹಬ್ಬವನ್ನು ವಿಶಿಷ್ಠ ರೀತಿಯಿಂದ ಆಚರಿಸಲಾಯಿತು.
ಸರಸ್ವತಿ ಪೂಜೆ ಆಯೋಜಿಸಿ, ನಾಗಪ್ಪನ ಮೂರ್ತಿಗೆ ಹಾಲೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿದ್ಯಾರ್ಥಿಗಳು ಹೆಣ್ಣು ಮಕ್ಕಳಿಗೆ ರಂಗೋಲಿ ಸ್ಪರ್ಧೆ, ನೃತ್ಯ, ಮೆಹಂದಿ ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಂಡು ಗಮನಸೆಳೆದರು.
ಸಿದ್ಧೇಶ್ವರ ಸಂಸ್ಥೆ ಚೇರ್ಮನ್ ಬಸಯ್ಯ ಹಿರೇಮಠ, ಕಾರ್ಯದರ್ಶಿ ಸದಾನಂದ ದೇಸಾಯಿ, ನಾಮನಿರ್ದೇಶಕ ಚೇರ್ಮನ್ ಎಸ್.ಎಚ್. ನಾಡಗೌಡ, ಸಿಎಒ ಎಚ್ .ವೆಂಕಟೇಶ, ಪ್ರಾಂಶುಪಾಲೆ ವಿಜಯಲಕ್ಷ್ಮೀ ಪಟ್ಟೇದ, ಉಪ ಪ್ರಾಂಶುಪಾಲೆ ಶ್ರೀದೇವಿ ಕನ್ನಾಳ ಇತರರಿದ್ದರು.