ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

15 HANUR 5
ಹನೂರಿನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸುರೇಶ್, ಸದಾನಂದಮೂರ್ತಿ, ಚೇತನ್, ಬಸವರಾಜು ಇತರರು ಇದ್ದರು.
Published on

ಹನೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಮಾತನಾಡಿ, ಈ ಹಿಂದೆ ರಾಜ್ಯಾಧ್ಯಕ್ಷರಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದರು. ಈ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು. ಜತೆಗೆ ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನವನ್ನು ಗಳಿಸುವುದರ ಮೂಲಕ ವಿರೋಧ ಪಕ್ಷಕ್ಕೆ ನಡುಕ ಹುಟ್ಟಿಸಿದ್ದರು. ಇದೀಗ ಇವರ ಪುತ್ರ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದು ಸಂತಸ ತಂದಿದೆ ಎಂದರು.

ಬೈಲೂರು ಗ್ರಾಪಂ ಅಧ್ಯಕ್ಷ ಸದಾನಂದಮೂರ್ತಿ, ಮುಖಂಡರಾದ ಚೇತನ್, ರಾಜಣ್ಣ, ಬಸವರಾಜು, ಕುಮಾರ್, ಸಿದ್ದಲಿಂಗಸ್ವಾಮಿ, ರುದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net