ಮೇ 26ರಂದು ಬಸವ ಜಯಂತಿ ಆಚರಣೆ

mysore
Published on

ಮೈಸೂರು: ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಸಂಘ-ಸಂಸ್ಥೆಗಳು, ಮೈಸೂರು ಬಸವ ಬಳಗ ಒಕ್ಕೂಟ ಸಹಯೋಗದಲ್ಲಿ ಮೇ 26ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಯೋಜನೆ ಸಂಬಂಧ ಸುತ್ತೂರು ಮಠದಲ್ಲಿ ಪೂರ್ವಭಾವಿ ಸಭೆ ನಡೆಯಿತು.


ಬಸವ ಬಳಗ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಎಂ. ಪ್ರದೀಪ್‌ಕುಮಾರ್ ಮಾತನಾಡಿ, ಶರಣರ ತತ್ವವನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಬಸವ ಬಳಗ ಒಕ್ಕೂಟದಿಂದ ಮೇ 26ರಂದು ಅದ್ದೂರಿಯಾಗಿ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.


ಅಂದು ಬೆಳಗ್ಗೆಯಿಂದ ರಾತ್ರಿವರೆಗೂ ವಿವಿಧ ಕಾರ್ಯಕ್ರಮ, ಗೋಷ್ಠಿಗಳು ನಡೆಯಲಿವೆ. ನಾಡಿನ ವಿವಿಧ ಮಠಾಧೀಶರು, ರಾಜಕೀಯ ನಾಯಕರು ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ. ಪ್ರತಿಯೊಬ್ಬರೂ ಈ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.


ಬಸವ ಬಳಗದ ಮಾಜಿ ಅಧ್ಯಕ್ಷ ಟಿ.ಎಸ್.ಲೋಕೇಶ್ ಮಾತನಾಡಿ, ಈ ಬಾರಿ ಅಧ್ಯಕ್ಷರಾಗಿ ಆಯ್ಕೆಯಾದ ಎಂ. ಪ್ರದೀಪ್ ಕುಮಾರ್ ಅವರು ಹೊಸತನ ತಂದಿದ್ದಾರೆ. ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದಾರೆ. ನಾವೆಲ್ಲರೂ ಅವರಿಗೆ ಸಹಕಾರ ನೀಡಬೇಕು. ಜತೆಗೆ ಆರ್ಥಿಕ ಸಹಕಾರ ಬಹಳ ಮುಖ್ಯ. ಈ ನಿಟ್ಟಿನಲ್ಲಿ ನಾನು ಕಾರ್ಯಕ್ರಮಕ್ಕೆ 50 ಸಾವಿರ ರೂ. ನೀಡುತ್ತಿದ್ದೇನೆ ಎಂದು ತಿಳಿಸಿದರು.


ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕಾನ್ಯ ಶಿವಮೂರ್ತಿ, ಬಸವ ಬಳಗಗಳ ಒಕ್ಕೂಟದ ಮಾಜಿ ಅಧ್ಯಕ್ಷ ಹಿನಕಲ್ ಬಸವರಾಜು, ಮುಖಂಡರಾದ ಮಾರ್ಬಳ್ಳಿ ಚಂದ್ರಶೇಖರ್, ಜಯಾಗೌಡ, ವಕೀಲ ಚಂದ್ರಮೌಳಿ, ಸಮಾಜದ ಹಿರಿಯರಾದ ಕೆ.ಎನ್.ಪುಟ್ಟಬುದ್ಧಿ, ಜಯಶಂಕರ ಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net