

ರಾಯಚೂರು ವಚನಕಾರ ದೇವರ ದಾಸಿಮಯ್ಯ ಜಯಂತಿಯನ್ನು ಏ.೨ ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ನೇಕಾರ ಸಮಾಜದಿಂದ ನಗರದ ಪಂ.ಸಿದ್ದರಾಜ ಜಂಬಲದಿನ್ನಿ ರಂಗಮAದಿರದಲ್ಲಿ ಜರುಗಲಿದೆ ಎಂದು ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಜಿ.ನಾಗರಾಜ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ ೯ ಗಂಟೆಗೆ ನಗರ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದವರೆಗೆ ದೇವರ ದಾಸಿಮಯ್ಯನವರ ಭಾವಚಿತ್ರ ಮೆರವಣಿಗೆ ನಡೆಸಲಾಗುತ್ತದೆ.
ಜಿಲ್ಲಾಽಕಾರಿ ನಿತೀಶ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ನಂತರ ರಂಗಮAದಿರದಲ್ಲಿ ನಡೆಯಲಿರುವ ವೇದಿಕೆ ಕಾರ್ಯ ಕ್ರಮವನ್ನು ಉಸ್ತು ವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದಾರೆ. ಜಿಲ್ಲೆ ಯ ಎಲ್ಲಾ ಶಾಸಕರುಗಳು, ಹಾಗೂ ಎಲ್ಲ ಅಽಕಾರಿಗಳು ಭಾಗವಹಿ ಸಲಿದ್ದಾರೆ ಎಂದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಐದು ಜನ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಎಚ್.ವೆಂಕಟೇಶ, ಉದಯಕುಮಾರ, ದತ್ತಾತ್ರೇಯ ವಲ್ಕಂದಿನ್ನಿ, ಪಿ.ಗೊವಿಂದರಾಜು,ಶ್ರೀನಿವಾಸರಾವ, ದೊಡ್ಡ ಈರಣ್ಣ ಕರ್ಲಿ ಇದ್ದರು.