ಸೆ.೧೦ ರಂದು ಡಾ.ಅಂಬೇಡ್ಕರ್ ಜಯಂತಿ ಆಚರಣೆ

H.L.DIVAKAR
Published on

ಮಡಿಕೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೆ.೧೦ ರಂದು ಡಾ.ಬಿ.ಆರ್.ಅಂಬೇಡ್ಕರ್‌ರವರ ೧೩೨ನೇ ಜಯಂತಿಯನ್ನು ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಆಚರಿಸಲಾಗುವುದು ಎಂದು ಘಟಕದ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಂದು ಬೆಳಗ್ಗೆ ೧೧ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಎಚ್.ವಿ.ದೇವದಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಕೊಡಗು ವೈದ್ಯಕೀಯ ವಿಭಾಗ ಸಂಸ್ಥೆ ಮತ್ತು ಭೋದಕ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್ ಪಾಲ್ಗೊಳ್ಳಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಸ್ತ್ರೀರೋಗ ತಜ್ಞೆ ಡಾ.ಸೌಮ್ಯ ಪ್ರಕಾಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಎಚ್.ಎ.ಮೋಹನ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಡಿ.ಜೆ.ಈರಪ್ಪ, ಎಚ್.ಎಸ್.ಗಣೇಶ್, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಎಚ್.ಬಿ.ಸಂತೋಷ್ ಕುಮಾರ್, ಮಡಿಕೇರಿ ನಗರ ಸಂಚಾಲಕ ಸಿ.ಪಿ.ಸಿದ್ದೇಶ್ವರ್ ಹಾಗೂ ಸಂಘಟನಾ ಸಂಚಾಲಕ ಲೋಕನಾಥ್ ಭಾಗವಹಿಸಲಿದ್ದಾರೆ.


ಸನ್ಮಾನ: ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ ನಗರದ ಸ್ತ್ರೀ ಶಕ್ತಿ ವೃದ್ಧಾಶ್ರಮದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ಹಾಗೂ ನಗರಸಭೆಯ ೭೦ ಪೌರ ಕಾರ್ಮಿಕರಿಗೆ ಶ್ವೆಟರ್ ವಿತರಿಸಲಾಗುವುದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net