ಅರ್ಥಪೂರ್ಣವಾಗಿ ಕನಕದಾಸ ಜಯಂತಿಯ ಆಚರಣೆ

fmcc college
Published on

ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್‌ನಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.

ಕಾಲೇಜ್‌ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿದರು.

ಈ ಸಂದರ್ಭ ಮಾತನಾಡಿದ ಕಾಲೇಜು ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದಲು ಪ್ರಯತ್ನಿಸಿದರು. ಅವರ ಚಿಂತನೆಗಳು ದಾಸ ಸಾಹಿತ್ಯಕ್ಕೆ ಮಹತ್ವದ ಕೊಡುಗೆಯಾಗಿದೆ ಎಂದರು.

ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಬೇಧ, ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿದರು. ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್ ಸಂತ ಕನಕದಾಸರೆಂದು ಶ್ಲಾಘಿಸಿದರು.

ಕಾಲೇಜ್‌ನ ಸ್ನಾತಕೋತ್ತರ ಅರ್ಥಶಾಸ್ತ್ರ ವಿಭಾಗದ ಸಂಚಾಲಕರಾದ ಡಾ.ಎಚ್.ಕೆ.ರೇಣುಶ್ರೀ, ಹಿಂದಿ ಉಪನ್ಯಾಸಕಿ ಖುರ್ಷಿದ ಭಾನು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net