ದೂರದೃಷ್ಟಿಯ ವ್ಯಕ್ತಿತ್ವ ಮಾದರಿ: ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಹೇಳಿಕೆ

nadaprabhu
ಬಂಟ್ವಾಳದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಶಾಸಕ ರಾಜೇಶ್ ನಾಕ್ ಉದ್ಘಾಟಿಸಿದರು. ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ಮೋನಪ್ಪ ಗೌಡ, ಲಿಂಗಪ್ಪ ಗೌಡ ಮೊದಲಾದವರಿದ್ದರು.
Published on

ಬಂಟ್ವಾಳ: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ಇಂದು ಬೆಂಗಳೂರು ಜಗತ್ತಿನ ಗಮನ ಸೆಳೆಯುತ್ತಿದೆ. ಅವರ ಕೆಲಸ ಕಾರ್ಯಗಳು ಇಂದಿಗೂ ಮಾದರಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಹೇಳಿದರು.

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿಯ ಬಂಟ್ವಾಳ ತಾಲೂಕುಮಟ್ಟದ ಆಚರಣೆ ಸಂದರ್ಭ ಚಾಲನೆ ನೀಡಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಉಪನ್ಯಾಸ ನೀಡಿದ ಲಿಂಗಪ್ಪ ಗೌಡ ಮಾತನಾಡಿ, ಕೆಂಪೇಗೌಡರ ಬದುಕು, ಸಾಧನೆಗಳ ಕುರಿತು ಬೆಳಕು ಚೆಲ್ಲಿದರು.

ಕೃಷಿ ಸಾಧಕರಾದ ಕೆ.ಚಂದ್ರಶೇಖರ್ ಅವರನ್ನು ಗೌರವಿಸಲಾಯಿತು. ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಮೋನಪ್ಪ ಗೌಡ, ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ತಾಪಂ ಆಡಳಿತಾಧಿಕಾರಿ ಡಿ.ಮಂಜುನಾಥ್, ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ.ಉಪಸ್ಥಿತರಿದ್ದರು.

ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು. ಶ್ರೀಕಲಾ ಕಾರಂತ ಬಹುಮಾನಿತರ ಪಟ್ಟಿ ಹಾಗೂ ಸನ್ಮಾನಿತರ ವಿವರ ವಾಚಿಸಿದರು. ಉಪತಹಸೀಲ್ದಾರ್‌ಗಳಾದ ರಾಜೇಶ್ ನಾಯ್ಕ, ನರೇಂದ್ರನಾಥ ಮಿತ್ತೂರು, ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net