ಜು.4 ಕ್ಕೆ ಕೆಂಪೇಗೌಡ ಜಯಂತಿ ಆಚರಣೆ

Kempegowda
Published on

ಬೆಟ್ಟದಪುರ: ಬೆಟ್ಟದಪುರದಲ್ಲಿ ಜು. 4ರಂದು ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆಯನ್ನು ಇಲ್ಲಿನ ಎಪಿಎಂಸಿ ಆವರಣದಲ್ಲಿ ಶನಿವಾರ ಆಯೋಜಿಸಲಾಗಿತ್ತು.


ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣಗೌಡ ಮಾತನಾಡಿ, ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪ್ರತಿ ವರ್ಷ ಸರ್ಕಾರ ಮಟ್ಟದಿಂದಲೂ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಕೆಂಪೇಗೌಡರ 515ನೇ ಜಯಂತಿಯನ್ನು ಬೆಟ್ಟದಪುರ ಹೋಬಳಿಯ ಕೇಂದ್ರ ಸ್ಥಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಅಂದು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಬೆಟ್ಟದಪುರದ ಪ್ರಮುಖ ಬೀದಿಗಳಲ್ಲಿ ಬೆಳ್ಳಿ ರಥದಲ್ಲಿ ಕೆಂಪೇಗೌಡ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಗುವುದು. ನಂತರ ಕೆಂಪೇಗೌಡರ ಜೀವನ ಮತ್ತು ಸಾಧನೆಗಳನ್ನು ಸ್ಮರಿಸುವ ವೇದಿಕೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.


ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಬಿ.ಜೆ.ದೇವರಾಜು ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದ್ದು, ಯಶಸ್ವಿಗೆ ಎಲ್ಲರ ಸಹಕಾರ ಅತ್ಯಮೂಲ್ಯವಾಗಿದೆ ಎಂದರು.


ನಿವೃತ್ತ ಶಿಕ್ಷಕ ಆರ್.ವೆಂಕಟೇಶ್, ನಾಗಣ್ಣ, ರಾಮಸ್ವಾಮಿ, ಮುಖಂಡರಾದ ಚಂದ್ರೇಗೌಡ , ರವಿ, ಗಿರಿಗೌಡ, ದೀಪು, ಉದಯ್, ನಟರಾಜ, ಚಂದ್ರಣ್ಣ, ಗಗನ್, ಪ್ರವೀಣ್, ಶಾಮ್, ಹರೀಶ, ರಘುರಾಯ, ಸಂದೀಪ್, ಶರತ್, ನಂದೀಶ್, ಮಂಜು, ಪ್ರತಾಪ್, ದೇವರಾಜ್ ಸೇರಿದಂತೆ ಯುವಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net