ಭಗವಾನ್ ಮಹಾವೀರ ಜಯಂತಿ ಆಚರಣೆ

MDK03
Published on

ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.


ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡರವರು ಭಗವಾನ್ ಮಹಾವೀರರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಬಲರಾಜ್ ರಂಗರಾವ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ನಯನ, ಚುನಾವಣಾ ತಹಶಿಲ್ದಾರ್ ರವಿಶಂಕರ, ಎನ್‌ಐಸಿ ಅಧಿಕಾರಿ ಅಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಮಧುಕರ್ ಇತರರು ದೀಪ ಬೆಳಗಿ, ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net