ಜಿಲ್ಲಾಡಳಿತದಿಂದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಆಚರಣೆ

raichur
raichur
Published on

ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯಲ್ಲಿ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ ದೀಪ ಬೆಳಗಿಸಿ ಚಾಲನೆ ನೀಡಿದರು.

ನಂತರ ಜಿಲ್ಲಾಧಿಕಾರಿ ನಿತೀಶ್ ಕೆ., ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ನನ್ನ ಜೀವನವೇ ನನ್ನ ಸಂದೇಶ ಎಂದು ತಿಳಿಸಿದ ಮಹಾತ್ಮ ಗಾಂಧೀಜಿಯವರು ಅತ್ಯಂತ ಸರಳವಾಗಿ ಬದುಕಿ ಬಹುದೊಡ್ಡ ಸಾಮಾಜಿಕ ಸಂದೇಶ ನೀಡಿದರು. ಅವರು ನೀಡಿದ ರಾಜಕೀಯ, ಸಾಮಾಜಿಕ, ಆರ್ಥಿಕ ಮೌಲ್ಯಗಳು ಸದಾಕಾಲ ಪ್ರಸ್ತುತವಾಗಿವೆ ಎಂದು ತಿಳಿಸಿದರು.

ನಂತರ ಮಹಾತ್ಮ ಗಾಂಧೀಜಿ ಜಯಂತಿ ನಿಮಿತ್ತ ವಾರ್ತಾ ಇಲಾಖೆಯಿಂದ ನಡೆಸಿದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಐಎಎಸ್ ಪ್ರೊಬೇಷನರಿ ಅಧಿಕಾರಿ ಪುರುರಾಜ್‌ಸಿಂಗ್ ಸೋಲಂಕಿ, ಅಪರ ಜಿಲ್ಲಾಧಿಕಾರಿ ಶಿವಾನಂದ, ತಹಸೀಲ್ದಾರ ಸುರೇಶ ವರ್ಮಾ, ಪಾಲಿಕೆಯ ಉಪ ಆಯುಕ್ತರಾದ ಸಂತೋಷಿರಾಣಿ ಎಂ, ವಾರ್ತಾ ಸಹಾಯಕರಾದ ಗವಿಸಿದ್ದಪ್ಪ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net