ಆ.23ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನದ ಆಚರಣೆ

Vijayavani-Featured-Image
Published on

ಬೆಂಗಳೂರು: ಜವಾಹರ್‌ಲಾಲ್ ನೆಹರು ತಾರಾಲಯ, ಬೆಂಗಳೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ವತಿಯಿಂದ ಶುಕ್ರವಾರ (ಆ.23) ಬೆಂಗಳೂರು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆಹರು ತಾರಾಲಯದಲ್ಲಿ ಬೆಳಿಗೆ 10 ಗಂಟೆಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವ ಎನ್.ಎಸ್.ಬೋಸರಾಜು ನೆರವೇರಿಸಲಿದ್ದಾರೆ.

ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಬಾಹ್ಯಾಕಾಶ ಕುರಿತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. 7, 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪಿಕ್ ಆ್ಯಂಡ್ ಸ್ಪೀಕ್ ಹಾಗೂ 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಗೆ ಜಿಗ್ ಸಾ ಫಜಲ್ ಹಾಗೂ 12 ವರ್ಷ ಮೇಲ್ಪಟ್ಟವರಿಗೆ ವಾಕ್ ಇನ್ ಕ್ವಿಜ್ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ತಾರಾಲಯದ ಜಾಲತಾಣದಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

ಇದೇ ವೇಳೆ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಎಲ್ವಿಎಂ-3 ಉಡಾವಣಾ ಮಾದರಿಗಳು, ಬಾಹ್ಯಾಕಾಶ ನೌಕೆಯ ಆಸಕ್ತಿದಾಯಕ ಮಾರ್ಗ ಮತ್ತು ವರ್ಣರಂಜಿತ ಫಲಕಗಳನ್ನು ಪ್ರದರ್ಶಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ತಾರಾಲಯದ ದೂ: 080-22379725ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net