ಅ.1ರಂದು ವಿಶ್ವಕರ್ಮ ಜಯಂತಿ ಆಚರಣೆ

16 HANUR 3
ವಿಶ್ವಕರ್ಮ ಜಯಂತಿ ಆಚರಣೆ ಸಂಬಂಧ ಹನೂರಿನಲ್ಲಿ ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
Published on

ಹನೂರು: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅ.1ರಂದು ವಿಶ್ವಕರ್ಮ ಜಯಂತಿ ಆಚರಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಎಂ.ಆರ್.ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ವಿಶ್ವಕರ್ಮ ಜಯಂತಿ ಆಚರಣೆ ಸಂಬಂಧ ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸಮುದಾಯದ ಮುಖಂಡರ ನಿರ್ಧಾರದ ಮೇರೆಗೆ ಅ.1 ರಂದು ಪಟ್ಟಣದಲ್ಲಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಆರ್‌ಎಂಸಿ ಆವರಣದಲ್ಲಿ ವಿಶ್ವಕರ್ಮರ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಗು ವುದು. ಈ ದಿಸೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಗುರುಪ್ರಸಾದ್, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಮಹದೇವ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ, ಮುಖಂಡರಾದ ವೀರಚಾರಿ, ರಾಚಪ್ಪಾಜಿ, ತಮ್ಮಯ್ಯಚಾರಿ, ಮುತ್ತುರಾಜು, ದೊರೆ, ರಾಮಾಚಾರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net