ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮ

5.npk-1
Published on

ನಾಪೋಕ್ಲು: ಪ್ರಕೃತಿಯ ನಾಶ ಮನುಕುಲದ ವಿನಾಶ ಎಂದು ಸಂಸ್ಥೆಯ ಪ್ರಭಾರ ಪ್ರಾಂಶುಪಾಲ ಕೆ.ಆರ್. ರಮೇಶ್ ಹೇಳಿದರು.

ಇಲ್ಲಿಗೆ ಸಮೀಪದ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಸುಂದರ ಜೀವವೈವಿಧ್ಯವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ರಕೃತಿಯ ಸಮತೋಲನದಿಂದ ಪ್ರಾಣಿ, ಪಕ್ಷಿಗಳು ಮತ್ತು ಮಾನವ ಆರೋಗ್ಯ ಜೀವನವನ್ನು ಸಾಧಿಸಲು ಸಾಧ್ಯ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹೇಳಿದರು.

ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಶಿಕ್ಷಕರಾದ ಎಸ್.ಪಿ. ಪರಮೇಶ್, ಎಂ.ಎ. ಅಯ್ಯಪ್ಪ, ಹರೀಶ್, ಹೇಮಾವತಿ, ಶೃಂಗಾ ಮತ್ತು ರೋಹಿತ್, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net