

ಹಗರಿಬೊಮ್ಮನಹಳ್ಳಿ: ಪಟ್ಟಣದ ರುದ್ರಭೂಮಿಯಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಕೈಗೊಂಡ ಕಾಮಗಾರಿ ತ್ವರಿತ ಪೂರ್ಣಗೊಳಿಸುವಂತೆ ಆಗ್ರಹಿಸಿ ಪುರಸಭೆ ಅಧ್ಯಕ್ಷ ಮರಿರಾಮಪ್ಪಗೆ ಸದಸ್ಯರು ಸೋಮವಾರ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಮೂಲಸೌಕರ್ಯಗಳಂತೆ ರುದ್ರಭೂಮಿ ಅವಶ್ಯ
ಜನ್ನು ನಾಗರಾಜ ಮಾತನಾಡಿ, ಸ್ಮಶಾನಗಳ ಅಭಿವೃದ್ಧಿ ಯೋಜನೆಯಡಿ ಕೈಗೊಂಡ ನೀರಿನ ಟ್ಯಾಂಕ್, ನೆರಳು ಮತ್ತು ಬೆಳಕಿನ ಸೌಲಭ್ಯ ಕಾಮಗಾರಿ ವಿಳಂಬವಾಗುತ್ತಿದ್ದು, ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷ ಮರಿರಾಮಪ್ಪ ಮಾತನಾಡಿ, ಕಾಮಗಾರಿ ಯಾವುದೇ ಕಾರಣಕ್ಕೂ ವಿಳಂಬವಾಗದು. ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.