ಗಣತಿ ಕಾರ್ಯ ಯಶಸ್ಸು ಎಲ್ಲರ ಜವಾಬ್ದಾರಿ

CINSUS
Published on

ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯವನ್ನು ಯಶಸ್ವಿಯಾಗಿ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಅಮಿತ ಬಿದರಿ ಹೇಳಿದರು.

ಪಟ್ಟಣದ ಉಮಾ ವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯಿಂದ ಜನರ ಜೀವನ ಮಟ್ಟ ಸುಧಾರಿಸಲು ಅಗತ್ಯವಿರುವ ಯೋಜನೆ ರೂಪಿಸಲು ಅನುಕೂಲವಾಗುತ್ತದೆ. ಶಿಕ್ಷಕರು ತಾಲೂಕಿನ ಪ್ರತಿ ಮನೆಗೂ ಭೇಟಿ ನೀಡಿ ಆ ಕುಟುಂಬದ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ನೀಡಬೇಕು ಎಂದರು.

ಗಣತಿ ಕಾರ್ಯದಲ್ಲಿ ಆಗುವ ತೊಂದರೆಗಳ ಕುರಿತು ನೀವು ಮುಕ್ತವಾಗಿ ತಿಳಿಸಿ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯವನ್ನು ಅಧಿಕಾರಿಗಳು ನೀಡುತ್ತಾರೆ ಎಂದು ಹೇಳಿದರು.

ತಹಸೀಲ್ದಾರ್ ಧನಂಜಯ ಎಂ, ತಾಪಂ ಇಒ ಕೃಷ್ಣಪ್ಪ ಧರ್ಮರ, ಬಿಆರ್‌ಪಿ ಈಶ್ವರ ಮೇಡ್ಲೇರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮರಿಗೌಡರ, ಇತರರಿದ್ದರು. ಶಿಬಿರದಲ್ಲಿ ಸುಮಾರು 250 ಶಿಕ್ಷಕರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net