ಶತಮಾನೋತ್ಸವ ಸಂಭ್ರಮದಲ್ಲಿ ನೆಲ್ಲಿಕಾರು ಸರ್ಕಾರಿ ಶಾಲೆ: ಮೇ 3ರಿಂದ ಗುರುವಂದನ, ಅಭಿವಂದನೆ, ಸಾಂಸ್ಕೃತಿಕ ಕಾರ್ಯಕ್ರಮ

Published on

ಬೆಳ್ತಂಗಡಿ: ನೆಲ್ಲಿಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶಾಲೆ 105 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ಮೇ 3 ಮತ್ತು 4ರಂದು ಶತಮಾನೋತ್ಸವ ಸಮಾರಂಭ ನಡೆಯಲಿದೆ.

ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೇಣಿಕ್ ರಾಜ್ ಜೈನ್, ಪ್ರವೀಣ್ ಕುಮಾರ್ ಅಧ್ಯಕ್ಷ ಹಾಗೂ ಶತಮಾನೋತ್ಸವ ಸಮಿತಿ ಸಂಚಾಲಕ ಪ್ರೊ.ಸುವೀರ್ ಜೈನ್, ಮುಖ್ಯಶಿಕ್ಷಕ ಹರೀಶ್ ಕೆ.ಎಂ. ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿದ್ದು, ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

3ರಂದು ಸಂಜೆ 6.30ಕ್ಕೆ ಸಂಸದ ಬ್ರಿಜೇಶ್ ಚೌಟ ಸಮಾರಂಭ ಉದ್ಘಾಟಿಸಲಿದ್ದು, ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶರಾದ ಲತಾ ಕೆ., ಮಾಜಿ ಸಚಿವ ವಿ.ಸುನೀಲ್ ಕುಮಾರ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮುಖ್ಯ ಅತಿಥಿಗಳಾಗಿರುವರು. 4ರಂದು ಬೆಳಗ್ಗೆ 9ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ 25ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ನೆಲ್ಲಿಕಾರು ಬಸದಿ ಆನುವಂಶೀಯ ಮೊಕ್ತೇಸರ ಪಣಪಿಲ ಅರಮನೆಯ ವಿಮಲ್‌ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಜೆ 6.30ರಿಂದ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net