ಗೋಣಿಕೊಪ್ಪಲು: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಶತಮಾನೋತ್ಸವ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಫೆ.2ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗ್ಗೆ 9.30 ಗಂಟೆಗೆ ಮೆರವಣಿಗೆ ನಡೆಯಲಿದೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ರಂಗಧಾಮಪ್ಪ, ಎಸ್‌ಡಿಎಂಸಿ ಅಧ್ಯಕ್ಷೆ ಕೆ.ಆರ್.ಶಾಂತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ.ಜಿ. ಮೋಹನ್ ಇತರರು ಪಾಲ್ಗೊಳ್ಳಲಿದ್ದಾರೆ. ಸಂಜೆ 6.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.