

ಕಡೂರು: ಉತ್ತಮ ಆಹಾರ ಪದ್ದತಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯೆ ಆಶಾ ತಮ್ಮಯ್ಯ ಹೇಳಿದರು.
ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಜೋಗದ ಸಿರಿ ಜ್ಞಾನವಿಕಾಸ ಕೇಂದ್ರದಲ್ಲಿ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಸಾವಯವ ಬದುಕಿನಲ್ಲಿ ಹಿರಿಯ ಪೂರ್ವಿಕರು ಸದೃಢವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿಯಲ್ಲಿ ಸಾಕಷ್ಟು ಬದಲಾವಣೆಯಿಂದ ಅನೇಕ ರೋಗಗಳನ್ನು ನಾವು ಆಹ್ವಾನಿಸಿದ್ದೇವೆ. ಆದ್ದರಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ವೇದಿಕೆ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು. ಒಕ್ಕೂಟದ ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಭಾಗ್ಯ, ಕೇಂದ್ರದ ಅಧ್ಯಕ್ಷೆ ಪಾರ್ವತಮ್ಮ, ಮೇಲ್ವಿಚಾರಕಿ ದಮಯಂತಿ, ಒಕ್ಕೂಟದ ಅಧ್ಯಕ್ಷೆ ಭಾರತಿ, ಸೇವಾಪ್ರತಿನಿಧಿ ಬಸಮ್ಮ ಮತ್ತಿತರಿದ್ದರು.