ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರ: ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ಜೆ.ಜವರೇಗೌಡ ಆರೋಪ

Published on

ಮೈಸೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಪ್ರಾಕೃತಿಕ ವಿಕೋಪದಡಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆಗೊಳಿಸಿಲ್ಲ. ಜತೆಗೆ ಕಾರ್ಮಿಕ, ರೈತ ವಿರೋಧಿಯಾಗಿದೆ ಎಂದು ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ಜೆ.ಜವರೇಗೌಡ ಆರೋಪಿಸಿದರು.
ಬರ ಕಾರಣ ರೈತರಿಗೆ ಬೇಸಾಯಕ್ಕೆ, ಜನ, ಜಾನುವಾರುಗಳಿಗೆ ನೀರಿಲ್ಲ. ಬರ ಪರಿಹಾರ ವಿಷಯದಲ್ಲಿ ಕೇಂದ್ರ ನಿರ್ಲಕ್ಷೃ ತೋರಿದೆ. ಹೀಗಾಗಿ, ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋದ ಪರಿಣಾಮ ಕೇಂದ್ರಕ್ಕೆ ಕೋರ್ಟ್ ಛೀಮಾರಿ ಹಾಕಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಂದರು.
ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಕೇಂದ್ರ ನೀಡಿದ್ದ ಭರವಸೆ ಈಡೇರಿಸಿಲ್ಲ. ದೆಹಲಿಯಲ್ಲಿ ರೈತರ ಹೋರಾಟಕ್ಕೆ ಅಡ್ಡಿಯುಂಟು ಮಾಡಲಾಗಿದೆ. ಕಾರ್ಪೋರೇಟ್ ಕಂಪನಿಗಳ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ, ರೈತರ ಆದಾಯ ದ್ವಿಗುಣ ಮಾಡಿಲ್ಲ ಎಂದು ದೂರಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಜಾರಿಗೊಳಿಸಿದೆ. ಇದರಿಂದಾಗಿ ರೈತರು, ಮಹಿಳೆಯರು, ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿದೆ. ಆದ್ದರಿಂದಾಗಿ ಕಾರ್ಮಿಕ, ಅಹಿಂದ, ರೈತ ವರ್ಗಗಳು ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವೇದಿಕೆ ರಾಜ್ಯ ಉಪಾಧ್ಯಕ್ಷ ಎಂ.ಮಧು, ಮುಖಂಡರಾದ ಎಸ್.ದೇವರಾಜು, ಶಶಿಕುಮಾರ್, ಶಿವಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net