ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ಕೇಂದ್ರಗಳ ಆರಂಭ

Screenshot_2025-10-10-11-21-03-46.jpg
Published on

ಧಾರವಾಡ: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎ್.ಎ.ಕ್ಯೂ. ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ ಗೆ 7,263ರೂ.ನಂತೆ ಧಾರವಾಡ ಜಿಲ್ಲೆಯ ರೈತರಿಂದ ಮಾತ್ರ ಖರೀದಿಸಲು ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎ್.ಎ.ಕ್ಯೂ. ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ರೈತರ ನೋಂದಣಿಯು 80 ದಿನಗಳವರೆಗೆ (ಡಿ.17) ನಡೆಯಲಿದ್ದು, ಖರೀದಿ 90 ದಿನಗಳವರೆಗೆ (ಡಿ.27) ರವರೆಗೆ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಖರೀದಿ ಕೇಂದ್ರದ ವಿವರ:

ಕುಂದಗೋಳ ತಾಲೂಕಿನ ಕುಂದಗೋಳ ಎ.ಪಿ.ಎಂ.ಸಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಯರಗುಪ್ಪಿ ಖರೀದಿ ಸಂಸ್ಥೆ, ಕಮಡೊಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಖರೀದಿ ಸಂಸ್ಥೆ, ಸಂಶಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಯರಗುಪ್ಪಿ ಖರೀದಿ ಸಂಸ್ಥೆ, ಇಂಗಳಗಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹಿರೇಹರಕುಣಿ ಖರೀದಿ ಸಂಸ್ಥೆ, ಕಳಸ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಖರೀದಿ ಸಂಸ್ಥೆ ಖರೀದಿ ಕೇಂದ್ರಗಳಾಗಿವೆ. ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಖರೀದಿ ಸಂಸ್ಥೆ, ಎ.ಪಿ.ಎಂ.ಸಿ ಹುಬ್ಬಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಶಿರೂರ ಖರೀದಿ ಸಂಸ್ಥೆ ಖರೀದಿ ಕೇಂದ್ರಗಳಾಗಿವೆ. ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ. ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ ತರಬೇಕು. ಸರ್ಕಾರಿ ರಜೆ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ಖರೀದಿಸಲಾಗುವುದು. ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಮಾಹಿತಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ, ಹುಬ್ಬಳ್ಳಿಯ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘವನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net