ಬರ ಪರಿಹಾರ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ: ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಅಸಮಾಧಾನ

vekatesh
Published on

ಮೈಸೂರು: ಬರ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದ್ದು, ಸುಪ್ರೀಂಕೋರ್ಟ್ ರಾಜ್ಯದ ಅರ್ಜಿ ವಿಚಾರಣೆ ನಡೆಸಿ ಬರಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದರು.

ರಾಜ್ಯದ ಬರ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಿದ ಕೇಂದ್ರ ತಂಡ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದರೂ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೆ ಹಿಂದೇಟು ಹಾಕುತ್ತಿರುವುದು ಖಂಡನೀಯ. ಬರ ಪರಿಹಾರ ಹಂಚಿಕೆಯ ವಿಚಾರದಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಸುಳ್ಳು ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ರಾಜ್ಯದ ಜನರು ಬಿಜೆಪಿಯ 25 ಸಂಸದರನ್ನು ಆಯ್ಕೆ ಮಾಡಿದ್ದರು. ಪಕ್ಷೇತರರಾಗಿ ಗೆದ್ದಿದ್ದ ಸುಮಲತಾ ಬಿಜೆಪಿಗೆ ಬೆಂಬಲ ನೀಡಿದ್ದರು. ಆದರೆ ಇವರು ಯಾರೂ ರಾಜ್ಯದ ಪರ ಧ್ವನಿ ಎತ್ತಲಿಲ್ಲ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಆರ್. ಮೂರ್ತಿ, ಜಿ.ವಿ. ಸೀತಾರಾಂ, ಎನ್.ಎಸ್. ಗೋಪಿನಾಥ್, ಭಾಸ್ಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net