

ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಯ ಅಂಗವಾಗಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ಇಲ್ಲಿನ ಅರವಿಂದ ನಗರದ ಬಿಜೆಪಿ ಕಾರ್ಯುಲಯದಲ್ಲಿ ಶನಿವಾರ ಜರುಗಿತು.
ರಾಜ್ಯಸಭಾ ಸದಸ್ಯ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಉಸ್ತುವಾರಿ ಈರಣ್ಣ ಕಡಾಡಿ ಮಾತನಾಡಿ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹಾಗೂ ಕೇಂದ್ರ ಸರ್ಕಾರ ಕಳೆದ ಅವಧಿಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಿಳಿಸಬೇಕು ಎಂದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಸಾಮಾಜಿಕ ಜಾಲತಾಣಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು. ಈಗಾಗಲೇ ಸೆಂಟ್ರಲ್ ಕ್ಷೇತ್ರದ 15 ವಾರ್ಡ್ಗಳಲ್ಲಿ ಪ್ರಚಾರ ಸಭೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.
ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಸಂತೋಷ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಮೇಯರ್ ವೀಣಾ ಬರದ್ವಾಡ, ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಶಿವು ಮೆಣಸಿನಕಾಯಿ, ನಾರಾಯಣ ಜರತಾರಘರ, ರವಿ ನಾಯಕ, ಅಶೋಕ ವಾಲ್ಮೀಕಿ, ರಾಜಣ್ಣ ಕೊರವಿ, ಮಲ್ಲಿಕಾರ್ಜುನ ಗುಂಡೂರ, ಉಮೇಶಗೌಡ ಕೌಜಗೇರಿ, ಎಂ.ವೈ. ನರಗುಂದ, ರೂಪಾ ಶೆಟ್ಟಿ, ಚಂದ್ರಿಕಾ ಮೇಸ್ತ್ರಿ, ಮೀನಾಕ್ಷಿ ವಂಟಮುರಿ, ಸಿದ್ದು ಮೊಗಲಿಶೆಟ್ಟರ, ಪ್ರಕಾಶ್ ಕ್ಯಾರಕಟ್ಟಿ, ಈಶ್ವರಗೌಡ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.