ಪತ್ತೆದಾರಿ ತರಬೇತಿ ಶಾಲೆ ಸೇರಿದಂತೆ ಹಲವು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ ಅಮಿತ್​ ಶಾ

amit shah
Published on

ಬೆಂಗಳೂರು: ದೇವನಹಳ್ಳಿ ತಾಲೂಕಿನಲ್ಲಿ ವಿವಿಧ ಯೋಜನೆ ಮತ್ತು ಕಟ್ಟಡ ಕಾಮಗಾರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಶನಿವಾರ ಚಾಲನೆ ನೀಡಿದರು.

ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್​​ ಪೊಲೀಸ್​ ರಿಸರ್ಚ್​ ಆ್ಯಂಡ್​ ಡೆವಲಪ್​ಮೆಂಟ್​ ಸಂಸ್ಥೆಯಡಿ ಕಾರ್ಯನಿರ್ವಹಿಸುವ ಕೇಂದ್ರೀಯ ಪತ್ತೆದಾರಿ ತರಬೇತಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರಿನ ಸೆಂಟ್ರಲ್​ ಡಿಟೆಕ್ಟಿವ್​ ಟ್ರೇನಿಂಗ್​ ಇನ್ಸ್​ಟಿಟ್ಯೂಟ್​ (ಸಿಡಿಟಿಐ) ಸಂಸ್ಥೆಯನ್ನು ಅರ್ಬನ್​ ಪೊಲೀಸಿಂಗ್​ (ಸ್ಮಾಟ್​ ಸಿಟಿ ಪೊಲೀಸಿಂಗ್​) ಹಾಗೂ ಬ್ಲಾಕ್​ ಚೈನ್​ ತಂತ್ರಜ್ಞಾನದೊಂದಿಗೆ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಈ ಕೇಂದ್ರದಲ್ಲಿ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಒಗಳು ಹಾಗೂ ಸಿಎಪಿಎಫ್​ಗಳ ಪೊಲೀಸ್​ ಅಧಿಕಾರಿಗಳಿಗೆ ತರಬೇತಿ ಕೋರ್ಸ್​ ಒದಗಿಸುವ ಉದ್ದೇಶ ಹೊಂದಲಾಗಿದೆ.

ಕೇಂದ್ರೀಯ ಪತ್ತೆದಾರಿ ತರಬೇತಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಆವತಿ ಗ್ರಾಮದಿಂದ ಅತ್ತಿಬೆಲೆ ಸಮೀಪದ ಅನಂತ ವಿದ್ಯಾನಿಕೇತನ ಶಾಲಾ ಆವರಣಕ್ಕೆ ತೆರಳಿದ ಅಮಿತ್​ ಶಾ, ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚುವಲ್​ ಮೂಲಕ ಬೆಂಗಳೂರಿನಲ್ಲಿರುವ ಇಂಡೋ ಟಿಬೆಟಿಯನ್​ ಬಾರ್ಡರ್​ ಪೊಲೀಸ್​ ಪ್ರಾದೇಶಿಕ ಪ್ರಧಾನ ಕಚೇರಿಯ ಹಲವು ಯೋಜನೆಗಳನ್ನು ಉದ್ಘಾಟಿಸಿದರು. 120 ಸೈನಿಕರ ಬ್ಯಾರಕ್​ಗಳು, 42 ವಸತಿ ಕಟ್ಟಡಗಳು, ಜಂಟಿ ಆಡಳಿತಾತ್ಮಕ ಕಟ್ಟಡಗಳು ಹಾಗೂ ಅಧಿಕಾರಿಗಳ ಹಾಗೂ ಅಧೀನ ಅಧಿಕಾರಿಗಳ ಮೆಸ್​ ಅನ್ನು ಆನ್​ಲೈನ್​ ಮೂಲಕ ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net