ಐಎಂಎ ಹೋರಾಟಕ್ಕೆ ಖಾಸಗಿ ವೈದ್ಯರ ಬೆಂಬಲ

IMG_7100
Published on

ಶಿವಮೊಗ್ಗ: ಕೇಂದ್ರ ಸರ್ಕಾರವು ಆಯುರ್ವೆದ ವೈದ್ಯರಿಗೆ ಕೆಲ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಿರುವುದನ್ನು ವಿರೋಧಿಸಿ ಶುಕ್ರವಾರ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಒಪಿಡಿ ಬಂದ್ ಮಾಡಿ ಐಎಂಎ ನೀಡಿದ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದರು.

ಜಿಲ್ಲೆಯ 668 ಖಾಸಗಿ ಆಸ್ಪತ್ರೆಗಳ ಪೈಕಿ ಎಲ್ಲ ಕಡೆಯೂ ಒಪಿಡಿ ಸೇವೆ 12 ತಾಸು ಸ್ಥಗಿತಗೊಂಡಿತ್ತು. ಇದಕ್ಕೆ ಪರ್ಯಾಯವಾಗಿ ಜಿಲ್ಲಾಸ್ಪತ್ರೆ ಒಳಗೊಂಡಂತೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿ ಜಿಲ್ಲೆಯ 120 ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿತ್ತು.

ಖಾಸಗಿ ಆಸ್ಪತ್ರೆಗಳಲ್ಲಿ ಅಪಘಾತ, ಕರೊನಾ ಸೇರಿ ತುರ್ತು ಸೇವೆ ಎಂದಿನಂತೆಯೇ ಮುಂದುವರಿದಿತ್ತು. ಒಳರೋಗಿಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ. ಮೆಡಿಕಲ್ ಸೇವೆಯಲ್ಲೂ ವ್ಯತ್ಯಾಸವಾಗಿರಲಿಲ್ಲ. 108 ಆಂಬುಲೆನ್ಸ್ ಸೇರಿ ಖಾಸಗಿ ಆಸ್ಪತ್ರೆಗಳ ಆಂಬುಲೆನ್ಸ್​ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಿದ್ದ ಕಾರಣ ಕೆಲ ರೋಗಿಗಗಳು ಪರದಾಡುವಂತಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net