ಕೇಂದ್ರ ಸರ್ಕಾರ ಇನ್ನೂ ಸ್ಪಂದಿಸಿಲ್ಲ: ಸಿದ್ದರಾಮಯ್ಯ

Siddaramaiah (9)
Published on

ಬರ ಪರಿಹಾರಕ್ಕೆ 17,900 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿ ಒಂದು ತಿಂಗಳಾದರೂ ವರದಿ ನೀಡಿಲ್ಲ ಹಾಗೂ ಸರ್ಕಾರದ ಮನವಿಗೆ ಕೇಂದ್ರ ಇದುವರೆಗೂ ಸ್ಪಂದಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ. ಎನ್‌ಡಿಆರ್‌ಎಫ್‌ನಡಿ ಪರಿಹಾರವನ್ನು ನೀಡಬೇಕಿದ್ದು, ಅದು ರಾಜ್ಯ ನೀಡಿರುವ ತೆರಿಗೆಯ ಮೊತ್ತವೇ ಆಗಿದೆ ಎಂದು ಹೇಳಿದರು.

ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ, ಛತ್ತೀಸ್‌ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಮಮಂದಿರ ಕಟ್ಟಲು ನಮ್ಮದೇನೂ ವಿರೋಧವಿಲ್ಲ. ಅದರಿಂದ ಮತದಾರರು ಬದಲಾಗುತ್ತಾರೆ ಎನ್ನುವುದು ಸುಳ್ಳು. ದೇಶದ ಜನರು ವೈವಿಧ್ಯತೆಯಲ್ಲಿ ಏಕತೆಯನ್ನು ಕಂಡುಕೊಂಡಿದ್ದಾರೆ. ದೇಶದಲ್ಲಿ ಅನೇಕ ಜಾತಿ, ಭಾಷೆಗಳು ಹಾಗೂ ಧರ್ಮಗಳಿದ್ದರೂ ಐಕ್ಯತೆ, ಒಗ್ಗಟ್ಟಿನಿಂದ ಉಳಿದುಕೊಂಡು ಬಂದಿದ್ದೇವೆ. ಒಳಗೊಳ್ಳುವಿಕೆಯಲ್ಲಿ ನಂಬಿಕೆ ಇಟ್ಟವರು ದೇಶದಲ್ಲಿ ಹೆಚ್ಚಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net